ಬಿಜೆಪಿ ಪ್ರಭಾವಿ ನಾಯಕರು ಆಪರೇಷನ್ ಹಸ್ತಕ್ಕೆ?: ಕೇಸರಿ ಪಡೆಯಲ್ಲಿ ತೀವ್ರ ಸಂಚಲನ..!
ಕಾಂಗ್ರೆಸ್ ನಾಯಕರು ಜಿಲ್ಲೆಯ ಬಿಜೆಪಿಯಲ್ಲಿನ ಅತೃಪ್ತ ಲಿಂಗಾಯತ ಮತ್ತು ಮರಾಠ ಸಮುದಾಯದ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರೇ ಸ್ವತಃ ಆಪರೇಷನ್ ಹಸ್ತಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಫೀಲ್ಡಿಗಿಳಿದಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತ ನಾಯಕರನ್ನು ಸಂರ್ಪಕಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ: ಪ್ರಭಾವಿ ಲಿಂಗಾಯತ ನಾಯಕರ ಅಕಾಲಿಕ ಅಗಲಿಕೆಯಿಂದ ಆಘಾತಗೊಂಡು ನಾಯಕತ್ವ ಕೊರತೆ ನಡುವೆಯೇ ಬೆಳಗಾವಿ ಜಿಲ್ಲಾ ಬಿಜೆಪಿಗೆ ಆಪರೇಷನ್ ಹಸ್ತ ಮತ್ತೆ ದೊಡ್ಡ ಆಘಾತ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಬಿಜೆಪಿ ಪ್ರಭಾವಿ ಲಿಂಗಾಯತ ನಾಯಕರು ಹಾಗೂ ಮರಾಠ ನಾಯಕರು ಕಾಂಗ್ರೆಸ್‌ನತ್ತ ವಾಲುತ್ತಿರುವ ಬೆಳವಣಿಗೆ ಕೇಸರಿ ಪಡೆಯಲ್ಲಿ ತೀವ್ರ ಸಂಚಲನ ಮೂಡಿಸಿದೆ.

0 Comments