ಮಚ್ಚಿನಿಂದ ಕೊಚ್ಚಿ ಬಾಲಕನ ಕೊಲೆ
ಕಿತ್ತೂರು ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಅಪ್ರಾಪ್ತ ವಯಸ್ಸಿನ ಬಾಲಕನ ಕೊಲೆ ಮಾಡಲಾಗಿದೆ.
ಮಲ್ಲಾಪೂರ ಗ್ರಾಮದ ಬಾಲಕ ಪ್ರಜ್ವಲ್ ಸುಂಕದ (ಕುರಬರ)(16) ಮೃತ ದುರ್ದೈವಿ. ಇನ್‌ಸ್ಟಾಗ್ರಾಮ್ ನಲ್ಲಿ ಬೈದಿದ್ದಾರೆ ಎಂಬ ಕಾರಣಕ್ಕೆ ಅಪ್ರಾಪ್ತ ವಯಸ್ಸಿನ ನಾಲ್ವರು ಬಾಲಕರು ಓರ್ವ ಯುವಕ ಸೇರಿಕೊಂಡು ಬಾಲಕ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ತಕ್ಷಣ ಬಾಲಕಕನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಮೃತ ಪಟ್ಟಿದ್ದಾನೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments