ಬೈಲಹೊಂಗಲ : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ BJP ಪ್ರತಿಭಟನೆ

,ಬೈಲಹೊಂಗಲ : ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೈಲಹೊಂಗಲ ಪಟ್ಟಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಸರ್ಕಾರ ವಿರುದ್ಧ ಘೋಷಣೆ ಕೂಗಿದರು.


ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ದುರಾಡಳಿತ, ಹಗರಣ, ಭ್ರಷ್ಟಾಚಾರದಲ್ಲಿ ತೊಡಗಿ ಸರ್ಕಾರದಿಂದ ರಾಜ್ಯದ ಜನ ಬೇಸತ್ತು ಹೋಗಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಗುರುಪಾದ ಕಳ್ಳಿ, ಉಪಾಧ್ಯಕ್ಷ ಸುಭಾಸ್ ತುರಮರಿ, ಯುವ ಮೋರ್ಚಾ ತಾಲೂಕಾ ಅಧ್ಯಕ್ಷ ಪ್ರಶಾಂತ ಅಮ್ಮಿನಭಾವಿ, ಓಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸಂತೋಷ ಹಡಪದ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಸಾಗರ ಭಾವಿಮನಿ, ಅಜ್ಜಪ್ಪ ಹೊಸೂರ ದಯಾನಂದ ಪರಾಳಶೆಟ್ಟರ, ವೀರೇಶ ಬೂಷಣ್ಣವರ, ಮೋಹನ ಒಕ್ಕುಂದ, ಗೌಡಪ್ಪ ಹೊಸಮನಿ, ಸದಾಶಿವ ಪಾಟೀಲ, ಅನೇಕ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Post a Comment

0 Comments