ಕಿತ್ತೂರು ವಿಜಯ ಸುದ್ದಿ.ಹಿರಿಯ ಪತ್ರಕರ್ತರು ಪ್ರದೀಪ ಮೇಲಿನಮನಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಚನ್ನಮ್ಮನ ಕಿತ್ತೂರು : ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿರುವ ಕಿತ್ತೂರು ತಾಲೂಕು ಪ್ರಜಾವಾಣಿ ಪತ್ರಿಕೆ ವರದಿಗಾರರಾದ ಪ್ರದೀಪ ಮೇಲಿನಮನಿ ಅವರಿಗೆ ಜಿಲ್ಲಾಡಳಿತ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಿತ್ತೂರು ತಾಲೂಕಿನಲ್ಲಿ ಸುಮಾರು 30 ವರ್ಷದಿಂದ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮೊದಲು ನಾಡೋಜ ಪತ್ರಿಕೆಯಿಂದ ಪತ್ರಿಕೋದ್ಯಮದಲ್ಲಿ ಸೇವೆ ಮಾಡಿಕೊಂಡು ಬರುತ್ತಿರುವ ಇವರು ಗೋಕಾಕ ಟೈಮ್ಸ್, ಉಷಾ ಕಿರಣ, ಕನ್ನಡಪ್ರಭ ಹಾಗೂ ಪ್ರಜಾವಾಣಿ ಪತ್ರಿಕೆಯಲ್ಲಿ ಈಗ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೆಯಲ್ಲಿ ಲೇಖನ, ಸುದ್ದಿಗಳನ್ನು ಬರೆಯುವ ಮೂಲಕ ಸಮಾಜ ಅಂಕು ಡೊಂಕುಗಳನ್ನು ತಿದ್ದುವ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ 2024 ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಜಿಲ್ಲಾಡಳಿತ ಅವರಿಗೆ ನೀಡುವುದರಿಂದ ಪ್ರಶಸ್ತಿ ಮೌಲ್ಯ ಹೆಚ್ಚಾಗಿದೆ. ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಶಾಸಕ ಬಾಬಾಸಾಹೇಬ ಪಾಟೀಲ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಸಮಾಜ ಸೇವಕ ಹಬೀಬ್ ಶಿಲೇದಾರ ಹರ್ಷ ವ್ಯಕ್ತ ಪಡಿಸಿದ್ದಾರೆ.

ಈ ಪ್ರಶಸ್ತಿಯನ್ನು ನವೆಂಬರ 1 ರಂದು ಮುಂಜಾನೆ 10.30 ಕ್ಕೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
 

Post a Comment

0 Comments