ಕಿತ್ತೂರು ವಿಜಯ ಸುದ್ದಿ..ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಕಿತ್ತೂರು ವಿಜಯ ಸುದ್ದಿ: ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ

ವಿಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲುಕಿನ ಬೋರಗಾಂವ ಗ್ರಾಮ ಲೆಕ್ಕಧಿಕರಿಯಾಗಿರುವ ವಿಠಲ ಡವಳೇಶ್ವರ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ವಿಠಲ ಡವಳೇಶ್ವರ ಅಕ್ರಮವಾಗಿ ಹಣ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ. ಚಿಕ್ಕೋಡಿಯಿಂದ ಬಾಗಲಕೋಟೆಗೆ 1.10 ಕೋಟಿ ಹಣ ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆಯಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಹಣ ಪತ್ತೆಯಾಗಿತ್ತು. ಡವಳೇಶ್ವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 

Post a Comment

0 Comments