ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಥಳಿಸಿದ್ದ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ, ಸಾರ್ವಜನಿಕವಾಗಿ ಆಕೆಯ ಬಟ್ಟೆ ಹರಿದು ಹಾಕಲಾಗಿದೆ. ಪಕ್ಕದ ಮನೆಯವರೇ ಮಹಿಳೆ ಮೇಲೆ ಹಲ್ಲೆ ನಡೆಸಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ.
ವಡ್ಡರವಾಡಿ ಮನೆಯಲ್ಲಿ ತಾಯಿ-ಮಗಳು ಸೇರಿ ನಾಲ್ವರು ಮನೆಯೊಂದರಲ್ಲಿ ವಾಸವಾಗಿದ್ದಾರೆ. ಪಕ್ಕದ ಮನೆಯ ಕುಟುಂಬದವರು ಮಹಿಳೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಮಾಡುತ್ತಿದ್ದಾರೆ. ಮನೆಗೆ ಪದೇ ಪದೇ ಯಾರೋ ಸಂಬಂಧವಿಲ್ಲದವರು ಬರುತ್ತಾರೆ. ಮನೆ ಖಾಲಿ ಮಾಡುವಂತೆ ಹೇಳುತ್ತಿದ್ದರು. ಇದೀಗ ನೆರೆಮನೆಯವರು ಏಕಾಏಕಿ ಮನೆಗೆ ನುಗ್ಗಿ ತಾಯಿ ಮಗಳನ್ನು ಹೊರಗೆಳೆದು ತಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments