ಕಿತ್ತೂರು ವಿಜಯ ಸುದ್ದಿ: ಲೋಕಾಯುಕ್ತ ವಿಚಾರಣೆ ಬಳಿಕ
ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಅಧಿಕಾರಿಗಳು ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿಲ್ಲ ಎಂದು ತಿಳಿಸಿದರು. ಮೈಸೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿಲ್ಲ ಎಂದರು.ಇದೇ ವೇಳೆ ಲೋಕಾಯುಕ್ತ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಮುಡಾ ಪ್ರಕರಣದ ತನಿಖೆ ಸಿಬಿಐಗೆ ಕೊಡಬೇಕು ಎಂಬ ಬಿಜೆಪಿ ನಾಯಕರಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಯಾವಾಗಲೂ ಸುಳ್ಳು ಹೇಳುತ್ತಾರೆ. ಸಿಬಿಐ ಇರುವುದು ಯಾರ ಕೈಯಲ್ಲಿ? ಬಿಜೆಪಿಯವರು ಯಾವತ್ತಾದರೂ ಅವರ ಅವಧಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದರಾ? ಯಾವ ಕೇಸ್ ನ್ನು ಅವರು ಸಿಬಿಐಗೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.
ನನ್ನ ಬಳಿಯ ಯಾವುದೇ ದಾಖಲೆಗಳನ್ನು ಅಧಿಕಾರಿಗಳು ಕೇಳಿಲ್ಲ. ಬಿಜೆಪಿಯವರ ಸುಳ್ಳು ಆರೋಪಗಳಿಗೆ ನಾನು ಕೋರ್ಟ್ ನಲ್ಲಿಯೇ ಉತ್ತರಿಸುತ್ತೇನೆ ಎಂದು ಹೇಳಿದರು.
0 Comments