ಕಿತ್ತೂರು ವಿಜಯ ಸುದ್ದಿ: 2024ನೇಸಾಲಿನ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಿದ್ದಾರೆ. ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನು ಡಿಸೆಂಬರ್ 9 ರಿಂದ 20ವರೆಗೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕರ್ ಯುಟಿ ಖಾದರ್, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಈಗಾಗಲೇ ಮಾಹಿತಿ ನೀಡಿದ್ದಾರೆ.
0 Comments