ಕಿತ್ತೂರು ವಿಜಯ ಸುದ್ದಿ. PDO ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಬಿಟ್ಟು ಅಭ್ಯರ್ಥಿಗಳಿಂದ ರಸ್ತೆ ತಡೆ, ಪ್ರತಿಭಟನೆ

ಕಿತ್ತೂರು ವಿಜಯ ಸುದ್ದಿ: ಪಂಚಾಯತ್ ರಾಜ್ ಇಲಾಖೆ ನೇಮಕಾತಿಗಾಗಿ ನಡೆಯುತ್ತಿದ್ದ ಪಿಡಿಒ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿಬಂದಿದೆ. ರಾಯಚೂರಿನ ಸಿದ್ಧನೂರಿನಲ್ಲಿ ನಡೆಯುತ್ತಿದ್ದ ಪಿಡಿಒ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಕೆಪಿಎಸ್ ಸಿ ವಿರುದ್ಧ ಸಿಡಿದೆದ್ದಾರೆ. ಇಂದು ನಡೆಯಬೇಕಿದ್ದ ಪರೀಕ್ಷೆಗೆ ಹಾಜರಾಗದೇ ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಕೋಣೆಯಲ್ಲಿಇ 24 ಅಭ್ಯರ್ಥಿಗಳಿಗೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ. 24 ಪ್ರಶ್ನೆ ಪತ್ರಿಕೆ ಬದಲು ಕೇವಲ 12 ಪ್ರಶ್ನೆ ಪತ್ರಿಕೆ ರವಾನಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರೆ.
 

Post a Comment

0 Comments