ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆ ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಅಷ್ಟೇ ಅಲ್ಲ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ; ಶಾಸಕ ಬಾಬಾಸಾಹೇಬ ಪಾಟೀಲ



 ಕಿತ್ತೂರು ವಿಜಯ ನ್ಯೂಸ್

ಚನ್ನಮ್ಮನ ಕಿತ್ತೂರು: ಮಕ್ಕಳ ವಿದ್ಯಾಭ್ಯಾಸವು ನಮ್ಮ ಸಮುದಾಯದ ಭವಿಷ್ಯವನ್ನು ರೂಪಿಸುತ್ತದೆ. ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಸುಧಾರಣೆ ನಮ್ಮ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಮಾತ್ರವಲ್ಲ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅವರು ಹೇಳಿದರು.

 ಕಿತ್ತೂರು ಪಟ್ಟಣದಲ್ಲ ಇರುವ ರಾಜಗುರು ಗುರುಭವನದಲ್ಲಿ ನಡೆದ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಅವರು ನಮ್ಮ ನಾಡಿನ ಶೈಕ್ಷಣಿಕ ಸಾಧನೆಗೆ ಹೊಸ ದಿಕ್ಕು ನೀಡುವ ಮಹತ್ವದ ಕಾರ್ಯಕ್ರಮ ಇದಾಗಿದ್ದ ಈ ರೀತಿಯ ಕಾರ್ಯಾಗಾರಗಳು ಶಿಕ್ಷಕರಿಗೆ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಮನ್ವಯ ಸಾಧಿಸಲು ಪೂರಕವಾಗುತ್ತವೆ ಎಂದ ಅಭಿಪ್ರಾಯಪಟ್ಟರು. ನಮ್ಮ ಐತಿಹಾಸಿಕ ಕಿತ್ತೂರು ನಾಡಿನ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ರಾಜ್ಯ ಮಟ್ಟದಲ್ಲಿ ಶ್ರೇಷ್ಠತೆಯನ್ನು ಸಾಧಿಸಬೇಕೆಂದು ಹುರಿದುಂಬಿಸಿದರು. ವಿದ್ಯಾರ್ಥಿಗಳ ಕಲಿಕೆ ಸುಲಭಗೊಳಿಸಲು ಆಧುನಿಕ ತಂತ್ರಜ್ಞಾನಗಳನ್ನು ಮತ್ತು ನವೀಕರಿಸಿದ ಶೈಕ್ಷಣಿಕ ಕ್ರಮಗಳನ್ನು ಅಳವಡಿಸಬೇಕೆಂದು ಸಲಹೆ ನೀಡಿದರು.

ಮಕ್ಕಳ ಅಭಿವೃದ್ದಿಗೆ ಪೋಷಕರ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಅಗತ್ಯವಾಗಿದ್ದು, ಅವರು ಶಿಕ್ಷಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದು, ಅವರಲ್ಲಿರುವ ಪ್ರತಿಭೆಯನ್ನು ಹೊರತೆಗೆದರೆ ಮಾತ್ರ ಫಲಿತಾಂಶ ಸುಧಾರಿಸಬಹುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರ ಶ್ರಮವನ್ನು ಪ್ರಶಂಸಿಸಿದರು, ನಾವು ಒಟ್ಟಾಗಿ ಶ್ರಮಿಸಿದಾಗ ಮಾತ್ರ ಉತ್ತಮ ಫಲಿತಾಂಶಗಳನ್ನು ಕಂಡುಕೊಳ್ಳಲು ಸಾಧ್ಯ ಎಂದು ಕಾರ್ಯಾಗಾರದ ಯಶಸ್ಸಿಗೆ ಹಾರೈಸಿದರು. 

ಈ ವೇಳೆ ತಾಲೂಕಾ ದಂಡಾಧಿಕಾರಿ ರವೀಂದ್ರ ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ತುಬಾಕದ. ಉಪ ಪ್ರಾಂಶುಪಾಲ ಮಹೇಶ ಚನ್ನಂಗಿ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಇದ್ದರು.

Post a Comment

0 Comments