ಕಿತ್ತೂರು ವಿಜಯ ಸುದ್ದಿ ಬೆಳಗಾವಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅರೆಸ್ಟ್


 ಕಿತ್ತೂರು ವಿಜಯ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲಿಸ್ ಠಾಣೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬಿಎನ್ ಎಸ್ ಕಾಯ್ದೆ 75 ಹಾಗೂ 79ರ ಅಡಿಯಲ್ಲಿ ಕೇಸ್ ದಾಖಲಾಗಿದೆ.ಎಫ್ ಐಆರ್ ದಾಖಲಾದ ಬೆನ್ನಲ್ಲೇ ಹಿರೇಬಾಗೇವಾಡಿ ಪೊಲೀಸರು ಬೆಳಗಾವಿ ಸುವರ್ಣಸೌಧದಲ್ಲಿ ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ. ಬಂಧನಕ್ಕೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದಂತೆ ಪೊಲೀಸರು ಸಿ.ಟಿ.ರವಿ ಅವರನ್ನು ಹೊತ್ತುಕೊಂಡು ಹೋಗಿ ವಾಹನದಲ್ಲಿ ಕರೆದೊಯ್ದಿದ್ದಾರೆ.

Post a Comment

0 Comments