ಕಿತ್ತೂರು ವಿಜಯ ಸುದ್ದಿ.ಸಾರಿಗೆ ನೌಕರರ ಮುಷ್ಕರ ತಡೆಯಲು ಮೊದಲ ಹೆಜ್ಜೆ ಇಟ್ಟ ಕರ್ನಾಟಕ ಸರ್ಕಾರ


 ಕಿತ್ತೂರು ವಿಜಯ ಸುದ್ದಿ : ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ್ 31ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಈಗಾಗಲೇ ಬೆಳಗಾವಿ ಅಧಿವೇಶನದ ಸಮಯದಲ್ಲಿಯೇ ಮುಷ್ಕರದ ಕುರಿತು ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಸರ್ಕಾರ ಸಹ ಮುಷ್ಕರ ತಡೆಯಲು ಮೊದಲ ಹೆಜ್ಜೆ.ಸಾರಿಗೆ ನೌಕರರು ಮುಷ್ಕರದ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ

ಡಿಸೆಂಬರ್ 31ರಿಂದ ಆರಂಭವಾಗುವ ಅನಿರ್ಧಿಷ್ಟಾವಧಿ ಮುಷ್ಕರವನ್ನು ತಡೆಯುವ ಉದ್ದೇಶದಿಂದ ರಾಮಲಿಂಗಾ ರೆಡ್ಡಿ 11,694 ನಿವೃತ್ತ ಸಿಬ್ಬಂದಿಗಳಿಗೆ 224.05 ಕೋಟಿ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಆದೇಶವನ್ನು ನೀಡಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಆದೇಶವನ್ನು ಮಾತ್ರ ನೀಡಿಲ್ಲ. ಶನಿವಾರ ಮೂವರು ನಿವೃತ್ತ ಸಿಬ್ಬಂದಿಗೆ ಬಾಕಿ ಪಾವತಿ ಚೆಕ್ ಅನ್ನು ಸಾಂಕೇತಿಕವಾಗಿ ನೀಡಿದ್ದಾರೆ. ಉಳಿದವರಿಗೆ ಹಣ ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿದೆ. ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಒಕ್ಕೂಟದ ಹಲವು ನೌಕರರ ಸಂಘಗಳು ಬೆಂಬಲ ನೀಡಿವೆ ಎಂದು ಹೇಳಿದೆ. ಈ ಮುಷ್ಕರದಿಂದ ರಾಜ್ಯದಲ್ಲಿ ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. 01.01.2024 ರಿಂದ ಹೊಸ ವೇತನ ಪರಿಷ್ಕರಣೆ ಹಾಗೂ ಇತರ ಬೇಡಿಕೆ ಇತ್ಯರ್ಥಪಡಿಸಬೇಕು* ನಿವೃತ್ತರಾದ ನೌಕರರಿಗೆ 27.06.2024ರ ಸುತ್ತೋಲೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಮುಷ್ಕರಕ್ಕೆ ಕರೆ ಕೊಟ್ಟಿರುವ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಈಗಾಗಲೇ ಸಾರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ಮಾತುಕತೆ ವಿಫಲವಾಗಿದೆ.

ಜಂಟಿ ಕ್ರಿಯಾ ಸಮಿತಿ ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವೇ ಬೆಳಗಾವಿ ಚಲೋ ನಡೆಸಿ ಮುಖ್ಯಮಂತ್ರಿಗಳಿಗೆ ದಿನಾಂಕ 31.12.2024 ರಿಂದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ನೋಟೀಸ್ ನೀಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಸಾರಿಗೆ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಗಿದೆ.ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಆದೇಶವನ್ನು ಹೊರಡಿಸಿದ ಬಳಿಕವೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಣೆ ಮಾಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಕರೆಯನ್ನು ವಾಪಸ್ ಪಡೆಯುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.ಒಂದು ವೇಳೆ ನೌಕರರು ಮುಷ್ಕರ ನಡೆಸಿದರೆ ಎಸ್ಮಾ ಜಾರಿಗೊಳಿಸುವ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಎಸ್ಮಾ ಕಾಯ್ದೆ ಜಾರಿಗೊಳಿಸಿದರೆ ನೌಕರರು ಮುಷ್ಕರ, ಪ್ರತಿಭಟನೆ ನಡೆಸುವಂತಿಲ್ಲ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ನೌಕರರನ್ನು ಬಂಧಿಸಬಹುದು, 6 ತಿಂಗಳು ಜೈಲು ಶಿಕ್ಷೆ ಸಹ ವಿಧಿಸಲು ಅವಕಾಶವಿದೆ. 

Post a Comment

0 Comments