ಕಿತ್ತೂರು ವಿಜಯ ಸುದ್ದಿ, ಬೆಳಗಾವಿ : ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಮಹಿಳೆಯೊಬ್ಬರು ಸಾವಿರಾರು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ.ಈ ಹಿನ್ನೆಲೆಯಲ್ಲಿ ಮಹಿಳೆಯ ಮನೆಗೆ ನೂರಾರು ಮಹಿಳೆಯರು ಮುತ್ತಿಗೆ ಹಾಕಿದ್ದಾರೆ.ಬೆಳಗಾವಿ ತಾಲೂಕಿನ ಹಾಲಬಾವಿಯ ಮಹಿಳೆ ಕೊಟಿ ಕೋಟಿ ವಂಚಿಸಿರುವುದಾಗಿ ಆರೋಪಿಸಲಾಗಿದ್ದು, ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆಯರ ಹೆಸರಿನಲ್ಲಿ ತಲಾ 50 ಸಾವಿರ ರೂ. ಸಾಲ ಪಡೆದು ತಾನು ತಲಾ 25 ಸಾವಿರ ರೂ. ಇಟ್ಟುಕೊಳ್ಳುತ್ತಿದ್ದಳು ಎಂದು ದೂರಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
0 Comments