ಕಿತ್ತೂರು ವಿಜಯ ಸುದ್ದಿ. ಬೆಳಗಾವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಚಾಲಕನ ಮೇಲೆ ಕೇಸ್ ದಾಖಲು


 ಕಿತ್ತೂರು ವಿಜಯ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಇದೀಗ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಸರ್ಕಾರಿ ಕಾರು ಚಾಲಕ ಜಿ ಶಿವಪ್ರಸಾದ್ ವಿರುದ್ಧ ಕಿತ್ತೂರು ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. BNS ಕಾಯ್ದೆ ಅಡಿ 281, 125(A) 125(B) ಜೀವಕ್ಕೆ ಕುತ್ತು ತರುವ ನಿಷ್ಕಾಳಜಿ ವಾಹನ ಚಾಲನೆ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದಾಗಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರ ಕಾರು ಇಂದು ಮುಂಜಾನೆ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಳರ್, ಸಹೋದರ ಚೆನ್ನರಾಜ ಹಟ್ಟಿಹೊಳಿ ಹಾಗೂ ಚಾಲಕ, ಗನ್ ಮ್ಯಾನ್ ಗಾಯಗೊಂಡಿದ್ದಾರೆ.

Post a Comment

0 Comments