ಕಿತ್ತೂರು ವಿಜಯ ಸುದ್ದಿ.ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ: ಡಿವೈಎಸ್‌ಪಿ ಅರೆಸ್ಟ್


 ಕಿತ್ತೂರು ವಿಜಯ ಸುದ್ದಿ : ತುಮಕೂರು ಪೊಲೀಸಪ್ಪನ ರಾಸಲೀಲೆ ಕೇಸ್ ಗೃಹ ಸಚಿವರಿಗೆ ಮುಜುಗರ ತಂದಿದೆ. ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ

ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾ.ಜಮೀನು ವ್ಯಾಜ್ಯ ಸಂಬಂಧ ದೂರು ಕೊಡೋಕೆ ಬಂದ ಮಹಿಳೆ ಮೇಲೆ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದರು. ತನ್ನ ಕಾಮತೃಷೆ ತೀರಿಸಿಕೊಳ್ಳಲು ಅಸಭ್ಯ ರೀತಿ ಬಳಸಿಕೊಂಡಿದ್ದರು. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದರು. ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿದ್ದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದರು. ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿತ್ತು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Post a Comment

0 Comments