ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಚ್ಚಣಕಿ ಶಾಲೆಯ 7ನೇ ತರಗತಿಯಲ್ಲಿ ಓದುತ್ತಿರುವ ಕುಮಾರಿ ಅನ್ನಪೂರ್ಣಾ ಈರಪ್ಪ ಕುಂದರನಾಡ. ಇವಳು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲ್ಲೂಕಿನ "ವಿವೇಕ ಗಿರಿಜನ ಶೈಕ್ಷಣಿಕ ಕೇಂದ್ರ, ಹೊಸಹಳ್ಳಿ" ಇವರು 8ನೇ ತರಗತಿ ಪ್ರವೇಶಕ್ಕಾಗಿ ಧಾರವಾಡದಲ್ಲಿ ಇತ್ತೀಚೆಗೆ ನಡೆಸಲಾದ ಪ್ರವೇಶ ಪರೀಕ್ಷೆಯಲ್ಲಿ 12ನೇ ರ‍್ಯಾಂಕ್ ಪಡೆದು ಆಯ್ಕೆಯಾಗಿದ್ದಾಳೆ. ಅವಳ ಈ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.
0 Comments