ಕಿತ್ತೂರು ವಿಜಯ ಸುದ್ದಿ: ರಾಜ್ಯದಲ್ಲಿ ಏಳು ಕಡೆ ಲೋಕಾಯುಕ್ತ ಪೊಲೀಸರು ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು, ಕೋಲಾರ, ಕಲಬುರ್ಗಿ, ದಾವಣಗೆರೆ, ವಿಜಯಪುರ , ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ
8 ಅಧಿಕಾರಿಗಳನ್ನೊಳಗೊಂಡ ತಂಡ ಬೆಳ್ಳಂ ಬೆಳಗ್ಗೆ ರೇಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್. ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ಚಿ ವೈದ್ಯ ಜಗದೀಶ್, ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.
0 Comments