ಡಿ.ಕೆ.ಶಿವಕುಮಾರ ಇಂದು ಬೆಳಗಾವಿಗೆ*
ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶನಿವಾರ ಸಂಜೆ ಬೆಳಗಾವಿಗೆ ಆಗಮಿಸಲಿದ್ದಾರೆ.
ರಾತ್ರಿ 8 ಗಂಟೆಗೆ ಮಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸುವ ಅವರು, ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ಶಾಸಕ ಆಸೀಫ್ ಸೇಠ್ ಅವರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ರಾತ್ರಿ 10.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
0 Comments