ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯ ನಡೆಸಿ ಹತ್ಯೆ ಹಾಗೂ ಆರೋಪಿ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾವಣೆ ಮಾಡಿದೆ.
ಸಿಐಡಿ ಎಸ್ ಪಿ ವೆಂಕಟೇಶ್ ನೇತೃತ್ವದ ಡಿವೈ ಎಸ್ ಪಿ ಪುನೀತ್ ಕುಮಾರ್, ಇನ್ಸ್ ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದು, ಪೊಲೀಸರಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾ.ಬಾಲಕಿ ಕೊಲೆಯಾದ ಸ್ಥಳ, ಆರೋಪಿ ಗುಂಡೇಟಿಗೆ ಬಲಿಯಾದ ಸ್ಥಳ ಹಾಗೂ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಅಧಿಕಾರಿಅಗ್ಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿಯ ಅಶೋಕನಗರ ವ್ಯಾಪ್ತಿಯಲ್ಲಿ ಏಪ್ರಿಲ್ 13ರಂದು ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಹೊತ್ತೊಯ್ದ ಬಿಹಾರ ಮೂಲದ ಆರೋಪಿ ರಿತೇಶ್, ಬಾಲಕಿ ಮೇಲೆ ದೌರ್ಜನ್ಯ ನಡೆಸಿ ಕೊಲೆಗೈದು ಪರಾರಿಯಾಗಿದ್ದ. ಸಿಸಿಕ್ಯಾಮರಾ ಆಧರಿಸಿ ಆರೋಪಿ ರಿತೇಶ್ ನನ್ನು ಪೊಲೀಸರು ಬಂಧಿಸಿದ್ದರು. ಸ್ಥಳಮಹಜರು ನಡೆಸಿದ್ದ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಈ ವೇಳೆ ಪೊಲೀಸರು ಆರೋಪಿಯನ್ನು ಹಿಡಿಯಲು ಗುಂಡೇಟು ಹೊಡೆದಿದ್ದು, ಕಾಲು ಕಾಲು ಹಾಗೂ ಬೆನ್ನಿಗೆ ಗುಂಡೇಟು ತಗುಲಿ ಸಾವನ್ನಪ್ಪಿದ್ದ.
0 Comments