ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರ ಕಾರು ಅಪಘಾತ ಪ್ರಕರಣ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದರಾಪುರ ತಾಲೂಕಿನ. ತಕ್ರಾವಾಡಿ ಗ್ರಾಮದ ಮಧುಕರ್ ಕೊಂಡಿರಾಮ ಸೋಮವಂಶ 65 ಬಂದಿತ ಆರೋಪಿ 2025 ರ ಜ. 14ರಂದು ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಕೇಸಿಗೆ ಸಂಬಂಧಿಸಿದಂತೆ ಚಾಲಕನ ವಿರುದ್ಧ ಚನ್ನಮ್ಮನ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಕೇಸ್ ದಾಖಲಾಗಿತ್ತು ಈ ಅಪಘಾತದಲ್ಲಿ ಸಚಿವರ ಸಹೋದರ ವಿಧಾನಪರಿಷತ್ ಸದಸ್ಯ ಚನ್ನರಾಜ ಗಟ್ಟಿಹೊಳಿ ಮತ್ತು ಕಾರು ಚಾಲಕ ಹಾಗೂ ಗನ್ ಮ್ಯಾನ್ ಸೇರಿ ನಾಲ್ವರ ಗಾಯಗೊಂಡಿದ್ದರು ಲಾರಿ ಬಣ್ಣ ಸೇರಿ ಸ್ಥಳದಲ್ಲಿ ಸಿಕ್ಕ ಸಾಕ್ಷಿಗಳನ್ನು ಪೊಲೀಸರು ಎಫ್ಐಆರ್ ರವಾನಿಸಿದ್ದರು ಬಳಿಕ ಟಿಸಿಟಿವಿ ದೃಶ್ಯಗಳನ್ನು ಆದರಿಸಿ ಲಾರಿ ಪತ್ತೆ ಮಾಡುವ ಮೂಲಕ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿದ್ದಾರೆ ಎಂದು ಎಸ್ ಪಿ.ಡಾ. ಭೀಮಾಶಂಕರ್ ಗುಳೇದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
0 Comments