ಕಿತ್ತೂರು ವಿಜಯ ಸುದ್ದಿ.. ಬೆಳಗಾವಿಯ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ


 ಬೆಳಗಾವಿ: ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ.

ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುವುದು ಸದ್ಯ ತಿಳಿದುಬಂದಿಲ್ಲ.

ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments